
ರಾಜ್ಯದಲ್ಲಿ ಇಂದು ಮತ್ತೆ ನಾಳೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ ಬೀದರ್ ಗದಗ ಕಲಬುರಗಿ ಕೊಪ್ಪಳ ರಾಯಚೂರು ವಿಜಯಪುರ ಧಾರವಾಡ ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

























































