
ರಾಜ್ಯದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆ ,ಜಿಲ್ಲಾಡಳಿತ ಪುತ್ತೂರು ,ಕಡಬ ,ಸುಳ್ಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿದೆ. ಬೆಂಗಳೂರು, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

























































