
ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಭಾರೀ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.
ಉಡುಪಿ ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ.