
ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಅತ್ಯಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆ ಪ್ರಯುಕ್ತ ಈ ಆರು ಜಿಲ್ಲೆಗಳಿಗೆ ಇಂದು ಮತ್ತು ಮಂಗಳವಾರ (ಜುಲೈ 2) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.