
ಮುಂದಿನ ಒಂದು ವಾರ ಭಾರೀ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ 30-40 ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.