
ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಭಾಗಗಳಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯ ಪ್ರಾಥಮಿಕ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.