
ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ,ದಕ್ಷಿಣ ಕನ್ನಡ, ಉಡುಪಿ ,ಬೆಳಗಾವಿ ,ಬೀದರ್ ,ಗದಗ ,ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆ ಆಗಲಿದೆ. ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್