ಹೆಬ್ರಿ ಶಾಲಾ – ಪದವಿ ಪೂರ್ವ ಕಾಲೇಜುಗಳಿಗೆ ರಜೆ

ರಾಜ್ಯದಲ್ಲಿ ಇನ್ನೂ 2 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 2 ದಿನಗಳ ಕಾಲ ಮಳೆ ಮುಂದುವರಿಯಲಿದೆ.
ಇಂದು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 26.07.2024 ರಂದು ಶುಕ್ರವಾರ ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್ ಘೋಷಣೆ ಮಾಡಿದ್ದಾರೆ.











