27.4 C
Udupi
Monday, May 4, 2026
spot_img
spot_img
HomeBlogಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಓರ್ವನ ಬಂಧನ

ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಓರ್ವನ ಬಂಧನ

ಬೆಂಗಳೂರು: ಕಾಟನ್ ಪೇಟೆ ಪೊಲೀಸರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ನಸ್ರು (30) ಎಂಬ ಓರ್ವ ಆರೋಪಿಯನನ್ನು ಬಂಧಿಸಿದ್ದಾರೆ.

ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹಸುವಿನ ಮಾಲೀಕ ಕರ್ಣ ಮಾತನಾಡಿ, ಆರೋಪಿ ಹುಚ್ಚ ಎಂದು ಈಗ ಹೇಳುತ್ತಿದ್ದಾರೆ. ಹುಚ್ಚ ಈ ರೀತಿ ಮಾಡುವುದಕ್ಕೆ ಸಾಧ್ಯನಾ? ಕೃತ್ಯ ಎಸಗಿರುವ ಆ ವ್ಯಕ್ತಿಯನ್ನು ನಾನು ನೋಡಿದ್ದೇನೆ. ಬ್ಯಾಗ್ ಅಂಗಡಿಯವನಿಗೆ ಹಸುವಿನಿಂದ ತೊಂದರೆ ಆಗುತ್ತಿತ್ತು ಅನಿಸುತ್ತೆ. ಎಷ್ಟು ವರ್ಷದಿಂದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಮಾಲೀಕನನ್ನು ಕೇಳಿ. ಮೊದಲು ಬ್ಯಾಗ್ ಅಂಗಡಿ ಮಾಲೀಕನನ್ನು ಅರೆಸ್ಟ್ ಮಾಡಬೇಕು. ಮುಂಜಾನೆ ಮೂರೂವರೆಗೆ ಈ ಘಟನೆ ಆಗಿದೆ ಅಂತಾರೆ. ಆಗ ಯಾವ ಬಾರ್ ಓಪನ್ ಇರುತ್ತೆ ಹೇಳಿ ನೋಡೋಣ? ಒಬ್ಬನೇ ಈ ಕೃತ್ಯ ಎಸಗಿರುವುದು ಸಾಧ್ಯವಿಲ್ಲ. ಇದರ ಹಿಂದೆ ಯಾರೋ ಇದ್ದಾರೆ. ಆರೋಪಿಯನ್ನು ತರಾತುರಿಯಲ್ಲಿ ಬಂಧಿಸಿ ಜೈಲಿಗೆ ಹಾಕಿದ್ದಾರೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ಗೊತ್ತಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಹಿನ್ನೆಲೆ:

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.

ಹಸುಗಳ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page