
ಹಾಸನ: ಅತ್ಯಾಚಾರ ಸಂತ್ರಸ್ತ ಮಹಿಳೆಯ ಕಿಡ್ನಾಪ್, ಮನೆ ಕೆಲಸದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಗಳಲ್ಲಿ ಜಾಮೀನು ಪಡೆದು ನಿರಾಳರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ 20 ದಿನಗಳ ನಂತರ ತವರಿಗೆ ಆಗಮಿಸುತ್ತಿದ್ದಾರೆ.ತಮ್ಮ ಕುಟುಂಬದ ಆರಾಧ್ಯದೈವ್ಯ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ, ಕುಲದೈವ ಹರದನಹಳ್ಳಿಯ ದೇವೇಶ್ವರ, ಹೊಳೆನರಸೀಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಿಗೆ ರೇವಣ್ಣ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ.