
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಫೆಡರೇಷನ್ ಆಫ್ ಕ್ವಾರಿ ಒನರ್ಸ್ ಅಸೋಸಿಯೇಷನ್ ನ ರಾಜ್ಯ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಆಗ್ರಹಿಸಿದ್ದಾರೆ. ಒಂದು ವೇಳೆ ಕ್ರಮಗಳನ್ನು ಕೈ ಗೊಳ್ಳದಿದ್ದರೆ ಹಿಂದೂ ಸಂಘಟನೆಗಳೊಂದಿಗೆ ಸೇರಿ ಹೋರಾಟ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ













