
ಹುಬ್ಬಳ್ಳಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಹೆಣ್ಣುಮಕ್ಕಳ ರೀತಿ ಶಕ್ತಿ ಯೋಜನೆಯಡಿ ಗಂಡುಮಕ್ಕಳಿಗೆ ಉಚಿತ ಪ್ರಯಾಣದ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದ ಸಂವಾದ ವೊಂದರಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣದ ಅವಕಾಶ ನೀಡುವ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು. ಈ ಸಂಬಂಧ ಸುದ್ದಿಗಾರರು ರಾಮಲಿಂಗ ರೆಡ್ಡಿಯವರನ್ನು ಪ್ರಶ್ನಿಸಿದಾಗ, ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದಾಗ ಈ ಕುರಿತು ವಿಚಾರಿಸುತ್ತೇನೆ. ಸದ್ಯ ನಮ್ಮ ಬಳಿ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದರು.



















