
ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರನ್ವೀರ್ ಸಿಂಗ್ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ನಟಿ ದೀಪಿಕಾ ಮುಂಬೈನ ಕೋಕಿಲ ಬೆನ್ ಆಸ್ಪತ್ರೆಗೆ ದಾಖಲಾಗಿದ್ದರು. ನಟಿ ಇತ್ತೀಚೆಗಸ್ತೆ ತನ್ನ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಗೌರಿ ಗಣೇಶ ಸಂಭ್ರಮದ ನಡುವೆ ನಟಿ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ.













