
ಮಂಗಳೂರು: ಮಂಗಳೂರು ಹೊರವಲಯದ ಮರವೂರು ಎಂಬಲ್ಲಿ ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿಯನ್ನ ಬರಿಗೈಯಲ್ಲಿ ಹಿಡಿದ ವ್ಯಕ್ತಿಗೆ ಹಾವು ಕಡಿದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
58 ವರ್ಷದ ರಾಮಚಂದ್ರ ಪೂಜಾರಿ ಎಂಬವರು ಬಂಟ್ವಾಳ ನಿವಾಸಿಯಾಗಿದ್ದು ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದರು. ಸೆ.4 ರ ಮಧ್ಯಾಹ್ನ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿಯೊಂದು ಕಾಣಿಸಿಕೊಂಡಿದ್ದು ವಿಷಪೂರಿತ ಕನ್ನಡಿ ಹಾವಿನ ಮರಿಯನ್ನು ಹೆಬ್ಬಾವಿನ ಮರಿ ಎಂದು ಭಾವಿಸಿ ಬರಿಗೈಯಲ್ಲಿ ರಾಮಚಂದ್ರ ಪೂಜಾರಿ ಹಿಡಿದಾಗ ಹಾವಿನ ಮರಿ ಕೈಗೆ ಕಚ್ಚಿದ್ದರೂ ಅದು ಹೆಬ್ಬಾವಿನ ಮರಿ ಎಂದು ನಿರ್ಲಕ್ಷಿಸಿದ್ದರು. ಬಳಿಕ ರಾಮಚಂದ್ರ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆ ದಾಖಲು ಮಾಡಲಾಗಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.













