
ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತ ದುರ್ದೈವಿ.
ಸಾತ್ವಿಕ್ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ರಜೆಯಲ್ಲಿ ಮುಂದಿನ ವಿದ್ಯಾಭ್ಯಾಸಕ್ಕೂ ಹಾಗೂ ಮನೆಯವರಿಗೆ ಸಹಾಯ ಮಾಡಲೆಂದು ಕೆಲಸಕ್ಕೆ ಹೋಗುತ್ತಿದ್ದು, ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುತ್ತಿರುವ ಸಂದರ್ಭ ಏಣಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಕರಣ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.






















































