31.5 C
Udupi
Friday, April 24, 2026
spot_img
spot_img
HomeBlogಹೆಬ್ರಿ :ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ

ಹೆಬ್ರಿ :ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ

ವಿಚಾರಣೆ ವೇಳೆ ತಡವರಿಸಿದ ತಾಯಿಯ ಮೇಲೆ ಹೆಚ್ಚಿದ ಅನುಮಾನ

ಹೆಬ್ರಿ : ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೂರೂವರೆ ವರ್ಷದ ಮಗು ಪ್ರೇರಿತ್‌ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮೈ ಹುಷಾರಿಲ್ಲ ಅಂತ ಪ್ರೇರಿತ್​ನನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್​ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್​​ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್​ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು, ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್​ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ.

ಮಗುವಿನ ಮೇಲೆ ಗಂಭೀರವಾಗಿ ಹಲ್ಲೆಪ್ರಕರಣ ಸಂಬಂಧ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಗವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page