
ಹೆಬ್ರಿ :ಶ್ರೀ ಪದ್ಮಾಂಬ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ವರಂಗ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಷಾ ಎಂ. ಹೆಬ್ಬಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕರಾದ ರತ್ನಾಕರ ಅರಿಗ ರವರು ಅಧ್ಯಕ್ಷತೆ ವಹಿಸಿದ್ದರು.ಸಹಶಿಕ್ಷಕಿ ಸುಜಾತ ಸ್ವಾಗತಿಸಿ, ಪ್ರಮೀಳಾ ವಂದಿಸಿದರು.ಜಯಂತಿ ಮತ್ತು ಸಾರಿಕಾ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಹಳೆ ವಿದ್ಯಾರ್ಥಿ ಸುರೇಶ್ ಪೂಜಾರಿ ಸಹಕರಿಸಿದರು.