
ನಕಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿದ್ದಾರೆಂದು ಆರೋಪಿಸಿ ಕ್ರಿಶ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ಎಂಬುವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ನಿರ್ಮಾಣವಾದ ಪರಶುರಾಮ ಥಿಂ ಪಾರ್ಕ್ ನಲ್ಲಿ ಕಂಚಿನ ಪ್ರತಿಮೆ ನಿರ್ಮಿಸುದಾಗಿ ನಿರ್ಮಿತಿ ಕೇಂದ್ರದಿಂದ ಆದೇಶ ಪಡೆದು ಬಳಿಕ ನಕಲಿ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದರ ಮೂಲಕ ಸರ್ಕಾರಕ್ಕೆ ವಂಚಿಸಲಾಗಿದೆ ಎಂದು ಕೃಷ್ಣ ಶೆಟ್ಟಿ ನಲ್ಲೂರು ದೂರು ನೀಡಿದ್ದಾರೆ.