
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ನಡೆದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ ದೊರೆಯಲಿದೆ ಎಂದು ಘೋಷಣೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಹೆಚ್ಚಿನ ಅನುದಾನ ಬಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೆ 30 ಸಾವಿರ ಕೋಟಿ ಅನುದಾನ ಕೊಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಇಲಾಖೆಯಿಂದ ಗೃಹ ಲಕ್ಷ್ಮೀ ಯೋಜನೆಯಡಿ 2 ಸಾವಿರ ಕೊಡ್ತಿದ್ದೇವೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.
ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿ ನಿರ್ಮಾಣಕ್ಕೆ ಶ್ರಮಿಸಬೇಕಿದೆ. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿಗೆ 25 ಸಾವಿರ ಬಹುಮಾನ ಕೊಡ್ತಿವಿ ಎಂದು ರಾಜ್ಯದ ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್ ಕೊಟ್ಟರಲ್ಲದೇ 400 ಜನ ಅಂಗನವಾಡಿ ಕಾರ್ಯಕರ್ತರಿಗೆ ಸೂಪರ್ ವೈಸರ್ ಆಗಿ ಬಡ್ತಿ ಕೊಡ್ತಿವಿ. ಸೂಪರ್ ವೈಸರ್ ಆಗಿ ಇರೋರಿಗೂ ಅಸಿಸ್ಟೆಂಟ್ ಸಿಡಿಒ ಆಗಿ ಬಡ್ತಿ ಕೊಡ್ತಿವಿ. ಈ ಬಗ್ಗೆ ಈಗ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದ್ದು ಶೀಘ್ರದಲ್ಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ಭಾಗ್ಯ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.













