32.1 C
Udupi
Wednesday, April 22, 2026
spot_img
spot_img
HomeBlogಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆ ಆಯ್ಕೆ ವಿಚಾರ

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆ ಆಯ್ಕೆ ವಿಚಾರ

ಪ.ಜಾತಿ ಮತ್ತು ಪಂಗಡಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು ಜನಸಂಖ್ಯೆ ಶೇ.25ರಷ್ಟಿದೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರ/ ಸಹಾಯಕಿಯರ ನೇಮಕಾತಿ ಪ್ರಕ್ರಿಯೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟಗಳು ಶೇ.40ಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕೇನ್ನುವ ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡಗಳಿಂದಾಗಿ ಸದರಿ ಜನಾಂಗದವರಿಗೆ ಉದ್ಯೋಗದಿಂದ ಅವಕಾಶ ವಂಚಿತರಾಗುತ್ತಿದ್ದಾರೆ.


ಆದುದರಿಂದ ಸರ್ಕಾರ, ಜಿಲ್ಲಾವಾರು ಜನಸಂಖ್ಯೆ ಅನುಗುಣವಾಗಿ ಪರಿಷ್ಕರಿಸಬೇಕು. ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಶೇ.25ರಷ್ಟು ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡಗಳನ್ನು ಆಯ್ಕೆ ಮಾಡಲು ಹೊರಡಿಸಿ ಸದರಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ತಾಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ/ ಸಹಾಯಕಿಯರ ಮಹಿಳಾ ಅಭ್ಯರ್ಥಿಗಳಿಂದ ಆಹ್ವಾನಿಸಲಾದ ನೇಮಕಾತಿ ಆದೇಶಗಳಲ್ಲಿ ಒಂದೇ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ನಿಗದಿಪಡಿಸದೇ ಇರುವ ಬಗ್ಗೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘವು ತೀವ್ರವಾದ ಆಕ್ಷೇಪ ಸಲ್ಲಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page