
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾ ಯು.ಶೆಟ್ಟಿಯವರು ಥೈಲ್ಯಾಂಡಿನ ಚಿಯಾಂಗ್ ರೈ ಮೈನ್ ಸ್ಟೇಡಿಯಂನಲ್ಲಿ ಫೆಬ್ರವರಿ 12ರಿಂದ 16ವರೆಗೆ ನಡೆದ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ,ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ, ಶಾಟ್ ಪುಟ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.
ವಿದ್ಯಾ ಯು.ಶೆಟ್ಟಿಯವರು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಯನ್ನು ಮಾಡಲಿ ಎಂದು ಶಾಲಾ ಆಡಳಿತ ಮಂಡಳಿ ಸದಸ್ಯರು,ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಹಾಗೂ ಶಿಕ್ಷಕವೃಂದ ಶುಭ ಹಾರೈಸಿದ್ದಾರೆ.

















