ಡಬ್ಬದಂತಹ ವಸ್ತು ಸ್ಪೋಟ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ…!

ಅಜೆಕಾರು: ಶಾಲೆಯ ಕಸಕ್ಕೆ ಶಿಕ್ಷಕರ ಸೂಚನೆಯಂತೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಕಸದಲ್ಲಿದ್ದ ಡಬ್ಬದಂತಹ ವಸ್ತು ಸ್ಫೋಟಗೊಂಡು ನಾಲ್ಕು ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಜೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ ಎನ್ನಲಾಗಿದೆ.
ಏಳನೇ ತರಗತಿಯ ವಿದ್ಯಾರ್ಥಿಗಳಾದ ಸಂಸ್ಕೃತ್ ಗಗನ್, ರಿತ್ವಿಕ್, ಅದ್ವಿನ್ ಗಾಯಗೊಂಡ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಶಿಕ್ಷಕರ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಅಜೆಕಾರು ಠಾಣೆಯಲ್ಲಿ ದೂರು ದಾಖಲಾಗಿದೆ.
































