
ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ಇದರ ಐದನೇ ಅಂಗಸಂಸ್ಥೆ ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ, ಅಜೆಕಾರು. ಇದು 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರದಿಂದ ಅನುಮೋದನೆಯನ್ನು ಪಡೆದಿರುತ್ತದೆ.
ಅಜೆಕಾರಿನ ಪದ್ಮನಗರದಲ್ಲಿ ಟ್ರಸ್ಟ್ 4ನೇ
ಕ್ಯಾಂಪಸ್ ನಿರ್ಮಾಣಗೊಂಡಿದ್ದು, ಟ್ರಸ್ಟಿನ ಸಮಾಜಸೇವಾ ಮತ್ತು ಶೈಕ್ಷಣಿಕ ಕಾಳಜಿಯ ಭಾಗವಾಗಿ ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ಉಚಿತಶಿಕ್ಷಣವನ್ನು ನೀಡುವುದಾಗಿ ನಿರ್ಧರಿಸಿರುತ್ತದೆ. ಟ್ರಸ್ಟ್ ಕಳೆದ 15 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುವುದರೊಂದಿಗೆ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಬಂದಿದೆ.
ಇದರ ಮುಂದುವರಿದ ಭಾಗವಾಗಿ ಪ್ರಸ್ತುತ ಎಂಟನೇ
ತರಗತಿ ಪೂರ್ಣಗೊಳಿಸಿ 9ನೇ ತರಗತಿಗೆ ಅಜೆಕಾರ್ ಜ್ಞಾನಸುಧಾಸಂಸ್ಥೆಯಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಎಂಟನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪೋಷಕರೊಂದಿಗೆ ಶಾಲಾ ಕಛೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆvತಿಳಿಸಿರುತ್ತದೆ.
ದಿನಾಂಕ 30.04.2026 ರ ಒಳಗೆ ಶಾಲಾ
ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಸಂಪರ್ಕ ಸಂಖ್ಯೆ : 7992920707






















































