
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು ಇದೀಗ 14 ದಿನಗಳ ಅಂದರೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಶನಿವಾರ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು ಎನ್ನಲಾಗಿದೆ.













