5 ಕೆಜಿ ಅಕ್ಕಿ, ತೊಗರಿ ಬೇಳೆ ,ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ದೊರೆಯುವ 10 ಕೆಜಿ ಅಕ್ಕಿಯ ಬದಲಾಗಿ, ಐದು ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಯ ಬದಲು ತೊಗರಿ ಬೇಳೆ ,ಎಣ್ಣೆ, ಸಕ್ಕರೆ, ಉಪ್ಪು ಇಷ್ಟನ್ನು ಇಂದಿರಾ ಆಹಾರ ಕಿಟ್ ಹೆಸರಿನಲ್ಲಿ ನೀಡಲು ಸರಕಾರ ನಿರ್ಧರಿಸಿದೆ.
ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.






















































