ಖಾದರ್ ಹೇಳಿಕೆಗೆ ಪರ-ವಿರೋಧ ಚರ್ಚೆ

ಮಂಗಳೂರು: ಅಪರಾಧ ಕೃತ್ಯಗಳನ್ನು ಮರುಕಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಅಗತ್ಯವಿದ್ದರೆ ಕೈ-ಕಾಲಿಗೆ ಗುಂಡು ಹಾರಿಸುವಂತಹ ಕ್ರಮಕ್ಕೂ ಹಿಂಜರಿಯಬಾರದು ಎಂದು ಅವರು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ಸಲಹೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಅವಧಿಯಲ್ಲಿ ಇಂತಹ ಕಟ್ಟುನಿಟ್ಟಿನ ಕ್ರಮಗಳಿಂದ ರೌಡಿಶೀಟರ್ಗಳು ಮತ್ತು ಅಪರಾಧಿಗಳು ಭಯಪಡುತ್ತಿದ್ದರು ಎಂದು ಹೇಳಿದರು. ಸಚಿವರ ಈ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.





















































































