
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಯನ್ನು ಅವರ ಪುಣ್ಯಭೂಮಿ ಇರುವ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಆಚರಿಸಲು ಅನುಮತಿ ಕೋರಿದ್ದ ಅರ್ಜಿಯನ್ನು ನಿರಾಕರಿಸಿ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆ ಆಯೋಜಿಸಲು ಅವಕಾಶ ನೀಡುವಂತೆ ಮತ್ತು ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡುವಂತೆ ಟ್ರಸ್ಟ್ ಮನವಿ ಮಾಡಿದ್ದು ಆದರೆ, ಅಭಿಮಾನ್ ಸ್ಟುಡಿಯೋ ಆವರಣದ ಆಸ್ತಿ ಮಾಲೀಕತ್ವದ ಕುರಿತು ರಾಜ್ಯ ಸರ್ಕಾರ ಮತ್ತು ಸ್ಟುಡಿಯೋ ನಡುವೆ ಕಾನೂನು ವಿವಾದ ಇರುವ ಕಾರಣ, ಹೈಕೋರ್ಟ್ ಈ ಮನವಿಯನ್ನು ಪರಿಗಣಿಸಲು ನಿರಾಕರಿಸಿದೆ.
ಈ ನಿರ್ಧಾರವು ವಿಷ್ಣುವರ್ಧನ್ ಅಭಿಮಾನಿಗಳಿಗೆ ಹಾಗೂ ಟ್ರಸ್ಟ್‌ಗೆ ನಿರಾಸೆ ಉಂಟು ಮಾಡಿದೆ.













