28.5 C
Udupi
Wednesday, April 29, 2026
spot_img
spot_img
HomeBlogಅಮೆರಿಕಾದಲ್ಲಿ ನನಗೆ ಟ್ರೀಟ್‌ಮೆಂಟ್‌ ಹಾಗೂ ಸರ್ಜರಿ ನಡೆಯಲಿದೆ: ನಟ ಶಿವರಾಜ್ ಕುಮಾರ್

ಅಮೆರಿಕಾದಲ್ಲಿ ನನಗೆ ಟ್ರೀಟ್‌ಮೆಂಟ್‌ ಹಾಗೂ ಸರ್ಜರಿ ನಡೆಯಲಿದೆ: ನಟ ಶಿವರಾಜ್ ಕುಮಾರ್

ಸ್ಯಾಂಡಲ್‌ವುಡ್ ಹ್ಯಾಟ್ರಿಕ್ ಹೀರೋ ಖ್ಯಾತಿಯ ನಟ ಶಿವರಾಜ್‌ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಹೀಗಾಗಿ ಚಿಕಿತ್ಸೆಗಾಗಿ ಸದ್ಯದಲ್ಲೇ ಶಿವಣ್ಣ ಅಮೆರಿಕಾಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಲ್ಕು ಸೆಷನ್ ಟ್ರೀಟ್‌ಮೆಂಟ್ ಬಳಿಕ 2025ರ ಜನವರಿಯಲ್ಲಿ ನಟ ಶಿವರಾಜ್‌ಕುಮಾರ್ ಅವರಿಗೆ ಅಮೆರಿಕಾದಲ್ಲಿ ಸರ್ಜರಿ ಆಗಲಿರುವ ಕಾರಣ ಶಿವಣ್ಣ ಅವರು ಸದ್ಯ ಎಲ್ಲ ಸಿನಿಮಾಗಳ ಶೂಟಿಂಗ್ ಪೋಸ್ಟ್‌ಪೋನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಶಿವಣ್ಣ ಅವರು ಭೈರತಿ ರಣಗಲ್’ ಸಿನಿಮಾ ಶೂಟಿಂಗ್ ಮುಗಿಸಿ ಬೇರೆ ಎಲ್ಲ ಸಿನಿಮಾಗಳ ಡೇಟ್ಸ್‌ ಅನ್ನು ಸದ್ಯ ಕ್ಯಾನ್ಸಲ್ ಮಾಡಿಸಿದ್ದಾರೆ.

ಕನ್ನಡದ ನಟ ಶಿವರಾಜ್‌ಕುಮಾರ್‌ ಅವರು ತೆಲುಗು ನಟ ರಾಮ್‌ಚರಣ್ ಜೊತೆಗೂಡಿ ‘RC-16’ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಸದ್ಯ ಅನಾರೋಗ್ಯದ ಕಾರಣಕ್ಕೆ ಇದನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ನಟ ಶಿವಣ್ಣ ಅವರು ‘ನಾನು ನನ್ನ ಅನಾರೋಗ್ಯವನ್ನು ನನ್ನ ಅಭಿಮಾನಿಗಳು ಸೇರಿದಂತೆ ಯಾರಿಂದಲೂ ಮುಚ್ಚಿಡುವ ಅಗತ್ಯವಿಲ್ಲ. ಆದರೆ, ಯಾರೂ ಅನಾವಶ್ಯಕ ಆತಂಕ ಪಡಬೇಡಿ. ಹೌದು, ಎಲ್ಲರಂತೆ ನಾನು ಕೂಡ ಮನುಷ್ಯ, ನನಗೂ ಅನಾರೋಗ್ಯ ಸಹಜವಾಗಿ ಕಾಡುತ್ತದೆ. ಹೌದು, ನನಗೆ ಹುಶಾರಿಲ್ಲ, ಆದರೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ. ಅಮೆರಿಕಾದಲ್ಲಿ ಟ್ರೀಟ್‌ಮೆಂಟ್‌ ಹಾಗೂ ಸರ್ಜರಿ ನಡೆಯಲಿದೆ’ ಎಂದು ಹೇಳಿದ್ದಾರೆ.

ಇದೀಗ ಈ ಸುದ್ದಿ ಎಲ್ಲಾ ಕಡೆ ಹರಡಿದ್ದು, ಕರುನಾಡ ಚಕ್ರವರ್ತಿ ಶಿವಣ್ಣ ಶೀಘ್ರ ಗುಣಮುಖರಾಗಿ ಬರಲಿ ಎಂದು ಅಸಂಖ್ಯಾತ ಅಭಿಮಾನಿಗಳು ಹಾರೈಸುತ್ತಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page