ಸಚಿವ ಈಶ್ವರ ಬಿ.ಖಂಡ್ರೆ ಹೇಳಿಕೆ

ಮಂಗಳೂರು:ಧರ್ಮಸ್ಥಳ ಸುತ್ತಮುತ್ತಲಿನ ಮೀಸಲು ಅರಣ್ಯದೊಳಗೆ (Forest) ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ ಶವ ಹೂತವರ ವಿರುದ್ಧವೂ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಚಿವರು ಧರ್ಮಸ್ಥಳ ಕೇಸ್ ಬಗ್ಗೆಯೂ ಪ್ರತಿಕ್ರಿಯಿಸಿದರು. ಧರ್ಮಸ್ಥಳ ಸುತ್ತಮುತ್ತಾ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ ಕೆಲವೆಡೆ ಅಸ್ಥಿಪಂಜರಗಳು ಸಿಕ್ಕಿವೆ. ಹೀಗಾಗಿ ಎಸ್‌ಐಟಿ ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.