ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಪಿಎಲ್ ಹಾಗೂ ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ. ಈ ಬಗ್ಗೆ ಯಾರೂ ಭಯ ಪಡುವುದು ಬೇಡ ಎಂದು ಭರವಸೆ ನೀಡಿದ್ದಾರೆ.
20-25% ಅರ್ಹರಲ್ಲದವರು ಬಿಪಿಎಲ್ ಗೆ ಸೇರಿಕೊಂಡಿದ್ದಾರೆ. ಬಡವರಲ್ಲದವರು ಹಾಗೂ ಅರ್ಹರಲ್ಲದವರೂ ಕೂಡ ಇದರಲ್ಲಿ ಸೇರಿಕೊಂಡಿದ್ದು 80% ರಾಜ್ಯದಲ್ಲಿ ಬಡವರ ಪ್ರಮಾಣ ಇದೆ. ಇದು ಸಾಧ್ಯವಾ? ಕರ್ನಾಟಕ ರಾಜ್ಯದಲ್ಲಿ 80% ಬಡವರಿದ್ದಾರಾ? ಎಂದು ಪ್ರಶ್ನಿಸಿದ ಕೆ.ಎಚ್ ಮುನಿಯಪ್ಪ ನಿಜವಾದ ಬಿಪಿಎಲ್‌ನವರಿಗೆ ಯಾರಿಗೂ ತೊಂದರೆ ಆಗುವುದಿಲ್ಲ. ಅಕಸ್ಮಾತ್ ಅರ್ಹರಿದ್ದು ಬಿಪಿಎಲ್‌ನಿಂದ ಕೈ ಬಿಟ್ಟರೆ, ಅಂತವರಿಗೆ ಪುನಃ ಬಿಪಿಎಲ್ ಕಾರ್ಡ್ ಸಿಗುವ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಬಿಪಿಎಲ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೆಸಿ ದೊಡ್ಡ ಗದ್ದಲ ಮಾಡ್ತಿದ್ದಾರೆ. ಯಾರು ಬಡತನ ರೇಖೆಗಿಂತ ಕೆಳಗಿದ್ದಾರೆ, ಯಾರು ಮೇಲಿದ್ದಾರೆ ಸತ್ಯವಾದ ಮಾಹಿತಿ ಹೊರಗೆ ಬಿಡುತ್ತೇನೆ. ಬಿಜೆಪಿಯವರು ಸುಮ್ಮನೆ ತರಲೆ ಮಾಡ್ತಿದ್ದಾರೆ. ಬಿಪಿಎಲ್‌ನವರು ಯಾರೂ ಕೂಡ ಭಯ ಪಡಬೇಕಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.