32.6 C
Udupi
Thursday, November 21, 2024
spot_img
spot_img
HomeBlogಅಳಿದುಹೋಗುವ ಹಂತಕ್ಕೆ ತಲುಪಿದ ನಕ್ಸಲ್ ಚಟುವಟಿಕೆ, ಕಾಂಗ್ರೆಸ್ ಸರಕಾರದಲ್ಲಿ ಮತ್ತೆ ಮುನ್ನಲೆಗೆ ಬರಲು ಕಾರಣವೇನು..?

ಅಳಿದುಹೋಗುವ ಹಂತಕ್ಕೆ ತಲುಪಿದ ನಕ್ಸಲ್ ಚಟುವಟಿಕೆ, ಕಾಂಗ್ರೆಸ್ ಸರಕಾರದಲ್ಲಿ ಮತ್ತೆ ಮುನ್ನಲೆಗೆ ಬರಲು ಕಾರಣವೇನು..?

ಜೀವದ ಹಂಗು ತೊರೆದು,ದೇಶ ವಿರೋಧಿ ಶಕ್ತಿಗಳನ್ನು ಹತ್ತಿಕ್ಕಿದ ಪೊಲೀಸರ ಕಾರ್ಯವೈಖರಿ ಅಭಿನಂದನೀಯ : ಶಾಸಕ ವಿ. ಸುನಿಲ್ ಕುಮಾರ್

ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲೀಯ ವಿಕ್ರಂ ಗೌಡನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯ ಶೈಲಿಯನ್ನು ನಾನು ಪ್ರಶಂಸಿಸುತ್ತೇನೆ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ಪೊಲೀಸರ ಕಾರ್ಯ ವೈಖರಿ ಅಭಿನಂದನೀಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಸುನಿಲ್ ಕುಮಾರ್ ತಿಳಿಸಿದ್ದಾರೆ.


ಆದರೆ ಈ ಘಟನೆಯ ಬಳಿಕ ಕೆಲ ಪ್ರಶ್ನೆಗಳು‌ ಉಳಿದಿವೆ.
ರಾಜ್ಯದಲ್ಲಿ ಹದಿನೈದು ವರ್ಷಗಳ ಬಳಿಕ ನಕ್ಸಲ್ ಚಟುವಟಿಕೆ ಇಷ್ಟು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಪೌಷ್ಠಿಕ ಆಹಾರ ಮೆದ್ದು ಎದ್ದು ನಿಂತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟದ ತನ್ಮೂಲಕ ರಾಜ್ಯದ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ. ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page