
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಿ.ಬಿ.ಎಸ್.ಸಿ ಮತ್ತು ಐ.ಸಿ.ಎಸ್.ಸಿ ಶಾಲೆಗಳ ಒಕ್ಕೂಟದ ವತಿಯಿಂದ ಯೆನೆಪೋಯ ಸ್ಕೂಲ್, ಮಂಗಳೂರು ಆಯೋಜಿಸಿದ ಈಜು ಸ್ಪರ್ಧೆ YEN SPLASH ನಲ್ಲಿ ಕಾರ್ಕಳ ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಲೆನೊರ ಡಿ ಸೋಜಾ 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ದ್ವಿತೀಯ,50 ಮೀಟರ್ ಬಟರ್ ಫ್ಲೈ ನಲ್ಲಿ ದ್ವಿತೀಯ,50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.ಇವರು ಲ್ಯಾನ್ಸಿ ಡಿಸೋಜಾ ಮತ್ತು ಫಾತಿಮಾ ನಿಶಾ ದಂಪತಿಗಳ ಪುತ್ರಿಯಾಗಿರುತ್ತಾರೆ.ಇವರಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.








