23.3 C
Udupi
Wednesday, August 13, 2025
spot_img
spot_img
HomeBlogಆಗಸ್ಟ್ 15 ರಿಂದ ಕುಕ್ಕೆ ಶ್ರೀ ಸುಬ್ರಮಣ್ಯ ದೇಗುಲದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ

ಆಗಸ್ಟ್ 15 ರಿಂದ ಕುಕ್ಕೆ ಶ್ರೀ ಸುಬ್ರಮಣ್ಯ ದೇಗುಲದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಮಣ್ಯ ದೇಗುಲದಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ.

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗುತ್ತಿದ್ದು ಈ ಹಿನ್ನೆಲೆ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ರೀತಿಯ ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ದೇಗುಲದ ಪರಿಸರದ ಅಂಗಡಿಗಳಲ್ಲಿ ವಾಣಿಜ್ಯ ಸಂಕೀರ್ಣಗಳಲ್ಲೂ ಏಕ ಬಳಕೆಯ ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ.

ಈ ಆದೇಶ ಮೀರಿದ್ದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ದಂಡದ ಜೊತೆಗೆ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಎಸ್ ಇಂಜಾಡಿ ಮತ್ತು ಇ.ಒ. ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page