
ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ ಈಗಾಗಲೇ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಜಾಮೀನು ಮಂಜೂರು ಮಾಡಿ ತೀರ್ಪನ್ನು ಪ್ರಕಟಿಸಿದೆ.































































































































