ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್ ನಲ್ಲಿ ಯಹೂದಿ ಸಮುದಾಯದ ಹಬ್ಬವಾದ ಹನುಕ್ಕಾ ಆಚರಣೆ ಆರಂಭವಾಗುತ್ತಿದ್ದ ವೇಳೆ ಭೀಕರ ಗುಂಡಿನ ದಾಳಿ ನಡೆದಿದ್ದು ಈ ವೇಳೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಹನುಕ್ಕಾ ಹಬ್ಬದ ಮೊದಲ ರಾತ್ರಿ ಆಚರಣೆಗೆ ಸಂಬಂಧಿಸಿದ ‘ಚಾನುಕಾ ಬೈ ದಿ ಸೀ’ ಕಾರ್ಯಕ್ರಮಕ್ಕಾಗಿ ಬೀಚ್ನಲ್ಲಿ ನೂರಾರು ಜನರು ಸೇರಿದ್ದ ಸಂದರ್ಭದಲ್ಲಿ ಸ್ಥಳೀಯ ಕಾಲಮಾನ 6:30 ರ ವೇಳೆಗೆ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮಕ್ಕಳು ಮತ್ತು ವೃದ್ಧರನ್ನು ಗುರಿಯಾಗಿಸಿ ಸುಮಾರು 50 ಗುಂಡುಗಳು ಹಾರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಕುರಿತು ನ್ಯೂ ಸೌತ್ ವೇಲ್ಸ್ ಪೋಲಿಸರು ಭಾರತೀಯ ಕಾಲಮಾನ ಅಪರಾಹ್ನ 02:17 ರ ಸುಮಾರಿಗೆ ಸಾಮಾಜಿಕ ಜಾಲತಾಣದಲ್ಲಿ ದಾಳಿಯ ಬಗ್ಗೆ ತಿಳಿಸಿ ಸ್ಥಳದಲ್ಲಿರುವವರು ಸುರಕ್ಷಿತ ಆಶ್ರಯ ಪಡೆಯುವಂತೆ ಎಚ್ಚರಿಕೆ ನೀಡಿದ್ದರು. ಪೋಲಿಸರು ಇಬ್ಬರು ಬಂದೂಕುಧಾರಿಗಳನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ.





