25.7 C
Udupi
Thursday, April 23, 2026
spot_img
spot_img
HomeBlogಆಹಾರ ವಸ್ತುಗಳಲ್ಲಿ ಕಲಬೆರಕೆ, ರಾಸಾಯನಿಕ ಬಳಕೆ, ಅವಧಿ ಮೀರಿದ ಆಹಾರ ಮಾರಾಟ ಮಾಡುವಲ್ಲಿ ಆಹಾರ ಇಲಾಖೆಯಿಂದ...

ಆಹಾರ ವಸ್ತುಗಳಲ್ಲಿ ಕಲಬೆರಕೆ, ರಾಸಾಯನಿಕ ಬಳಕೆ, ಅವಧಿ ಮೀರಿದ ಆಹಾರ ಮಾರಾಟ ಮಾಡುವಲ್ಲಿ ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು: ಆಹಾರ ಇಲಾಖೆಯು ರಾಜ್ಯದ್ಯಂತ ಶುಕ್ರವಾರ ಮತ್ತು ಶನಿವಾರ ಹೋಟೆಲ್, ರೆಸ್ಟೋರೆಂಟ್ಗಳ ವಿರುದ್ಧ ಕಾರ್ಯಾಚರಣೆ ನಡೆಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ದಿನೇಶ್ ಗುಂಡೂರಾವ್ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು.

ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು. ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್ಪಾರ್ಕ್ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page