
ಬೆಂಗಳೂರು: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ನಿರ್ಧರಿಸಲಿದ್ದು 26 ಸಾಕ್ಷಿಗಳ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಇಂದು ತೀರ್ಪು ನೀಡಲಿದೆ.
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದು ಇಂದಿನ ಪ್ರಕರಣದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗುವುದು ಅನುಮಾನವಾಗಿದೆ.