
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ,ಹಲೆವೆಡೆ ಪ್ರತಿಭಟನೆಗಳು ನಡೆಯುತ್ತಿದೆ.
ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹೆಚ್ಚಿನ ಭದ್ರತೆ ನಿಯೋಜಿಸಿದ್ದು ನಿನ್ನೆ ದಕ್ಷಿಣ ಕನ್ನಡ ಬಂದ್ ಯಶಸ್ವಿಯಾಗಿದೆ. ಇಂದು ಮಂಗಳೂರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿ ನೀಡಲಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಎಡಿಜಿಪಿ,ಜಿಲ್ಲಾಧಿಕಾರಿ, ಕಮೀಷನರ್, ಎಸ್ಪಿ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.













