26.8 C
Udupi
Monday, April 13, 2026
spot_img
spot_img
HomeBlog"ಇದು ಕ್ರೋಧಿನಾಮ ಸಂವತ್ಸರ, ಈ ಸಮಯದಲ್ಲಿ ಅನಾಹುತಗಳು ಆಗೋದು ಹೆಚ್ಚು": ಕೋಡಿಮಠ ಸ್ವಾಮೀಜಿ ಭವಿಷ್ಯ

“ಇದು ಕ್ರೋಧಿನಾಮ ಸಂವತ್ಸರ, ಈ ಸಮಯದಲ್ಲಿ ಅನಾಹುತಗಳು ಆಗೋದು ಹೆಚ್ಚು”: ಕೋಡಿಮಠ ಸ್ವಾಮೀಜಿ ಭವಿಷ್ಯ

ಬೆಳಗಾವಿ: ಬೆಳಗಾವಿಯಲ್ಲಿ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದು ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ. ‘ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ. ಕೇವಲ ಭಾರತದಲ್ಲಿ ಮಾತ್ರವೇ ಅಲ್ಲ. ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ. ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

ಬರುವ ದಿನಗಳಲ್ಲಿ ರೋಗರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತೆ, ಅಲ್ಪಾಯಸ್ಸು ಕಡಿಮೆ ಆಗುತ್ತೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದ್ದಾವೆ, ಆದರೆ, ಬೆಳಕು ಕಪ್ಪು ಓರೆ ಮಾಡಿದಾಗ ಕಪ್ಪೆ ಜಾಸ್ತಿ ಎಂದು ಭವಿಷ್ಯ ನುಡಿದಿದ್ದಾರೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page