
ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು ಈ ಸಭೆಯಲ್ಲಿ ಇನ್ನು ಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧರಿಸಿದೆ.
ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್/ವಿಶೇಷ ವಿಮಾನ ಗುತ್ತಿಗೆ ಪಡೆಯಲಾಗುತ್ತಿದ್ದು ಇನ್ನು ಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್/ವಿಮಾನ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ವಾರ್ಷಿಕ ಗುತ್ತಿಗೆಗೆ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ಆಹ್ವಾನ ಮಾಡಲು ನಿರ್ಧರಿಸಿದ್ದು ಆಸಕ್ತಿಯುಳ್ಳ ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗಿಯಾಗಿಯಲು ಅವಕಾಶ ನೀಡಲಾಗುತ್ತದೆ.
ಗಂಟೆಗಳ ಆಧಾರದಲ್ಲಿ ಸೇವೆ ಪಡೆಯುವಾಗ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ ಸೇವೆ ಲಭ್ಯವಿರುತ್ತಿರಲಿಲ್ಲ. ಈಗ ವಾರ್ಷಿಕ ಗುತ್ತಿಗೆಯಿಂದ ಸಮಯಕ್ಕೆ ಸರಿಯಾಗಿ ಸೇವೆ ಸಿಗಲಿದೆ ಎಂಬ ಹಿನ್ನೆಲೆಯಲ್ಲಿ ಸರ್ಕಾರದಿಂದ ವಾರ್ಷಿಕ ಗುತ್ತಿಗೆಗೆ ನಿರ್ಧಾರ ಮಾಡಲಾಗಿದೆ ಎನ್ನಲಾಗುತ್ತಿದೆ.