
ಬೆಂಗಳೂರು: ಇನ್ನುಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ನಿಯಮ ಜಾರಿಗೊಳಿಸುವುದಾಗಿ ಕೆಇಎ ಮಾಹಿತಿ ನೀಡಿದ್ದು ಅದೇನೆಂದರೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಯ ಉತ್ತರಕ್ಕೆ 5 ಆಯ್ಕೆಯನ್ನು ನೀಡಲಿದೆ.
ಇನ್ನುಮುಂದೆ ನಡೆಯುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದ್ದು ಯುಜಿಸಿಇಟಿ-2025 ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಿಇಟಿ ಪರೀಕ್ಷೆಯಲ್ಲಿ ಎಂದಿನಂತೆ ಒಂದು ಪ್ರಶ್ನೆಯ ಉತ್ತರಕ್ಕೆ 4 ಆಯ್ಕೆ ಮುಂದುವರಿಯಲಿದ್ದು ಸಿಇಟಿ ಎಕ್ಸಾಂನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ 5 ಉತ್ತರ ಆಯ್ಕೆಗಳು ಇರಲಿವೆ ಎಂದು ಮಾಹಿತಿ ನೀಡಿದೆ.






















































