28.5 C
Udupi
Monday, April 13, 2026
spot_img
spot_img
HomeBlogಇರಾನ್‌ಗೆ ಶಸ್ತ್ರಾಸ್ತ್ರ ಪೂರೈಕೆ: ಚೀನಾಗೆ 50% ಸುಂಕ ಎಚ್ಚರಿಕೆ ನೀಡಿದ ಟ್ರಂಪ್

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಕೆ: ಚೀನಾಗೆ 50% ಸುಂಕ ಎಚ್ಚರಿಕೆ ನೀಡಿದ ಟ್ರಂಪ್

ವಾಷಿಂಗ್ಟನ್: ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ಚೀನಾ ಮುಂದಾಗುತ್ತಿದೆ ಎಂಬ ವರದಿಗಳ ಹಿನ್ನೆಲೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಶಸ್ತ್ರಾಸ್ತ್ರ ಪೂರೈಕೆ ನಡೆದರೆ 50% ಸುಂಕ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಚೀನಾ ಇರಾನ್‌ಗೆ ನೆರವು ನೀಡಿದರೆ ಅದರಿಂದ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ವಿಶೇಷವಾಗಿ ಹೆಚ್ಚುವರಿ ಸುಂಕದ ಭಾರ ಹೊರುವ ಸ್ಥಿತಿ ಉಂಟಾಗಲಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮುನ್ನ ಅಮೆರಿಕದ ವ್ಯಾಪಾರ ಪ್ರತಿನಿಧಿ ಜೆಮಿಸನ್ ಗ್ರೀರ್ ಮಾತನಾಡಿ, ಚೀನಾದೊಂದಿಗೆ ಉತ್ತಮ ಸಂಬಂಧ ಕಾಪಾಡಲು ಅಮೆರಿಕ ಬಯಸಿದರೂ, ಇರಾನ್ ವಿಚಾರದಲ್ಲಿ ಚೀನಾದ ಪಾತ್ರ ಸಂಬಂಧಗಳನ್ನು ಸಂಕೀರ್ಣಗೊಳಿಸಬಹುದು ಎಂದು ಹೇಳಿದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸುವ ಜವಾಬ್ದಾರಿ ಚೀನಾದದ್ದೇ ಎಂದೂ ಅವರು ತಿಳಿಸಿದ್ದಾರೆ.

ಇನ್ನೂ ಕೆಲವು ವಾರಗಳಲ್ಲಿ ಇರಾನ್‌ಗೆ ವಾಯು ರಕ್ಷಣಾ ವ್ಯವಸ್ಥೆ ಒದಗಿಸಲು ಚೀನಾ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭುಜದ ಮೇಲೆ ಬಳಸಬಹುದಾದ ರಕ್ಷಣಾ ವ್ಯವಸ್ಥೆಗಳನ್ನು ಮೂರನೇ ದೇಶಗಳ ಮೂಲಕ ಸಾಗಿಸುವ ಯತ್ನ ನಡೆಯುತ್ತಿದೆ ಎಂದು ಅಮೆರಿಕದ ಗುಪ್ತಚರ ವರದಿ ಸೂಚಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page