ತೋಷಿತ್ ಹಾಗೂ ಮನಸ್ವಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿಯ ತೋಷಿತ್ ಎಸ್. ಬಾಬು 50ಮೀ ಫ್ರೀ ಸ್ಟೈಲ್ ಹಾಗೂ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನದ ಪದಕವನ್ನು, ದ್ವಿತೀಯ ಪಿಯುಸಿಯ ಮನಸ್ವಿ 50ಮೀ ಹಾಗೂ 100ಮೀ ಫ್ರೀ ಸ್ತೈಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜೊತೆಗೆ ದ್ವಿತೀಯ ಪಿಯುಸಿಯ ಜಗನ್ ಮೋಹನ್ ರೆಡ್ಡಿ 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 100ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.













