
ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಮ್ಮಲ್ಲೂ ಸಣ್ಣಪುಟ್ಟ ಸಮಸ್ಯೆಗಳಿದ್ದು ಆ ಸಮಸ್ಯೆಗಳನ್ನು ಪರಿಹರಿಸಿಕೊಂಡು ಬಹುತೇಕ ಈ ತಿಂಗಳ ಅಂತ್ಯಕ್ಕೆ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಹೇಳಿದ್ದಾರೆ.
ಲಿಂಗರಾಜು ನೇತೃತ್ವದಲ್ಲಿ ರಾಜ್ಯದಲ್ಲಿ ಶಿಸ್ತು ಸಮಿತಿ ಇದ್ದು ನಿಯಮವನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಶಿಪಾರಸು ಮಾಡಿದ್ದಾರೆ.
ಮುಂದಿನ ಕ್ರಮವನ್ನು ಕೇಂದ್ರ ತೆಗೆದುಕೊಳ್ಳಲಿದ್ದು ರಾಷ್ಟ್ರೀಯ ಅಧ್ಯಕ್ಷರು ಮತ್ತು ಹಲವು ರಾಜ್ಯಗಳ ಅಧ್ಯಕ್ಷರ ಚುನಾವಣೆಗಳು ಏಕಕಾಲದಲ್ಲಿ ನಡೆಯಬಹುದು ಎಂದು ಹೇಳಿದರು.