
ಬೆಳಗಾವಿ: ಇತ್ತೀಚಿಗೆ ರಾಜ್ಯದಲ್ಲಿ ಆರ್‌ಎಸ್ಎಸ್ ಪಥಸಂಚಲನ ವಿಚಾರ ಬಾರಿ ಸದ್ದು ಮಾಡಿದ್ದು ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಈ ವರ್ಷ ರಾಜ್ಯಾದ್ಯಂತ ಒಟ್ಟು 518 ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ನಡೆದಿದ್ದು ಅದರಲ್ಲಿ ಅಂದಾಜು 2 ಲಕ್ಷಕ್ಕೂ ಅಧಿಕ ಸ್ವಯಂ ಸೇವಕರು ಭಾಗವಹಿಸಿದ್ದರು. ಈ ಪಥಸಂಚಲನಗಳಲ್ಲಿ ಯಾವುದೇ ಗಲಾಟೆ, ದೊಂಬಿ ಅಥವಾ ಕೋಮುಗಲಭೆಗಳು ನಡೆದಿಲ್ಲ ಎಂದು ರಾಜ್ಯ ಸರ್ಕಾರವು ಅಧಿಕೃತವಾಗಿ ತಿಳಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿ ಜಿಲ್ಲೆ, ಚಿತ್ತಾಪುರದ ಪಥಸಂಚಲನ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಪಥಸಂಚಲನೆಕ್ಕೆ ಅನುಮತಿ ನಿರಾಕರಿಸುವಾಗ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆಯ ಕಾರಣ ನೀಡಿದ್ದು ಆದರೆ ಚಿತ್ತಾಪುರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ 2025ರ ಇಲ್ಲಿಯವರೆಗೆ 518 ಪಥಸಂಚಲನಗಳು ನಡೆದಿದ್ದು ಪ್ರತಿ ಪಥಸಂಚಲನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸ್ವಯಂಸೇವಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಎಲ್ಲಿಯೂ ಯಾವುದೇ ಗಲಾಟೆ, ದೊಂಬಿ ಅಥವಾ ಕೋಮುಗಲಭೆ ನಡೆದಿರುವುದಿಲ್ಲ. ಅಂದರೆ ಕಾನೂನು ಸುವ್ಯವಸ್ಥೆಯ ಸಮಸ್ಯೆ ಉದ್ಭವಿಸಿಲ್ಲ ಎಂದು ಸರ್ಕಾರವು ಸ್ವತಃ ಒಪ್ಪಿಕೊಂಡಿದೆ.





