ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಬೆಂಗಳೂರು: 5 8 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸಲಾಗುವುದಿಲ್ಲ. 5, 8 ,9 ಬೋರ್ಡ್ ಪರೀಕ್ಷೆಯ ಬದಲು ಸಂಕಲಾತ್ಮಕ ಮೌಲ್ಯಮಾಪನ-2( ಎಸ್ ಎ -2) ವನ್ನು ನೀಡಲಾಗುವುದು ಹಾಗೂ ಹನ್ನೊಂದನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನವಿರುವ ಕಾರಣ ರಾಜ್ಯ ಪಠ್ಯಕ್ರಮದ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಪೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ಶಿಕ್ಷಾ ಕೋಪೈಲೆಟ್ ನ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಈ ವಿಚಾರ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಶಿಕ್ಷ ಕೋಪೈಲೆಟ್ ಆಪ್ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಿರುವ ಪಾರ್ಟಿಯ ಕ್ರಮ ಭಾಷೆ ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ ಕಲಿಕಾ ಅನುಭವ ಕಟ್ಟಿ ಕೊಡುವುದಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.













