
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಕಾರ್ಕಳ ತಾಲ್ಲೂಕು ಹಾಗೂ ಸರಕಾರಿ ಪ್ರೌಢಶಾಲೆ ಬಜಗೋಳಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್. ಎನ್. ವಿ.ಪ್ರೌಢಶಾಲೆಯ ಬಾಲಕರ ತಂಡವು ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವರ್ಗದವರು, ಸಿಬ್ಬಂದಿವರ್ಗ,ತರಬೇತುದಾರರುಹಾಗೂ ಶಾಲಾ ಪೋಷಕರು ಅಭಿನಂದಿಸಿ ಶುಭ ಕೋರಿರುತ್ತಾರೆ.













