
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ನರ್ಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16ರೊಳಗೆ ಅರ್ಜಿ ಸಲ್ಲಿಸಬೇಕು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ಉಡುಪಿ, ಹುದ್ದೆಯ ಅಧಿಸೂಚನೆ:
ಹುದ್ದೆಗಳ ಸಂಖ್ಯೆ: 23
ಉದ್ಯೋಗ ಸ್ಥಳ: ಉಡುಪಿ
ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ, ನರ್ಸ್
ಸಂಬಳ: ತಿಂಗಳಿಗೆ ರೂ. 14044 – 140000 ರೂ.
ಅರ್ಜಿ ಸಲ್ಲಿಸುವ ವಿಧಾನ:
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಬೇಕು.
- ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಅಕ್ಟೋಬರ್ 16ರೊಳಗೆ ಕಳುಹಿಸಬೇಕು.
ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ಯೋಜನಾ ನಿರ್ವಹಣಾ ಘಟಕ, NHM ಉಡುಪಿ ಜಿಲ್ಲೆ, ಕರ್ನಾಟಕ









