
ಉಡುಪಿ : ಕಾರು ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಗುರುವಾರ ಸಂಜೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಳದ ಬಳಿ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ವಿಶ್ವನಾಥ್ ಕೆ ಪುತ್ರನ್ ಮೃತಪಟ್ಟಿದ್ದಾರೆ.
ಗುರುವಾರ ಸಂಜೆ 5:30ರ ಸುಮಾರಿಗೆ ಪಾಂಗಲದ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭ ಮಂಗಳೂರಿನಿಂದ ಉಡುಪಿಯ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ವಿಶ್ವನಾಥ ಮತ್ತು ಸಂತೋಷ್ ಎನ್.ಅಮೀನ್ ಇದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಬ್ಬಸಕ್ಕೆ ವಿಶ್ವನಾಥ ರಸ್ತೆಯ ಬಲಭಾಗಕ್ಕೆ ಬಿದ್ದಿದ್ದು ಇದೇ ಸಂದರ್ಭದಲ್ಲಿ ಹಿಂದೆಯಿಂದ ಬರುತ್ತಿದ್ದ ಟ್ಯಾಂಕರ್ ವಿಶ್ವನಾಥ ಅವರ ಮೇಲೆ ಹರಿದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ವಿಶ್ವನಾಥ ಕೆ ಪುತ್ರನ್ ಮೃತಪಟ್ಟಿದ್ದಾರೆ.
ಕಾರು ಚಾಲಕ ಮತ್ತು ಟ್ಯಾಂಕರ್ ಚಾಲಕನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















