
ಉಡುಪಿ: ಜಿಲ್ಲಾಡಳಿತವು ಪ್ರಸಕ್ತ ಸಾಲಿನ ಸ್ವರ್ಣ ಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ.
- ಜನರು ಮಣ್ಣು ಹಾಗೂ ನೈಸರ್ಗಿಕ ಬಣ್ಣಗಳಿಂದ ಮಾಡಿದ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಿ ವೈಜ್ಞಾನಿಕವಾಗಿ ವಿಸರ್ಜಿಸಬೇಕು.
- ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ವಿಲೇವಾರಿ ಮಾಡಲು ಸೂಚಿಸಲಾಗಿದೆ.
- ಉಚ್ಚ ನ್ಯಾಯಾಲಯದ ಆದೇಶದಂತೆ ಪಿ.ಓ.ಪಿ ವಿಗ್ರಹಗಳ ಮತ್ತು ರಾಸಾಯನಿಕ ಬಣ್ಣದ ವಿಗ್ರಹಗಳ ತಯಾರಿಕೆ ಮಾರಾಟಕ್ಕೂ ನಿರ್ಬಂಧವಿದ್ದು ನಿಯಮ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಡೆಯುವುದು ಕಡ್ಡಾಯ.
- ಏಕ ಬಳಕೆ ಪ್ಲಾಸ್ಟಿಕ್, ರಾತ್ರಿ 10:00 ಯಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕ ಬಳಕೆ ಹಾಗೂ ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿ ಸುಡಿಸುವುದನ್ನು ನಿಷೇಧಿಸಲಾಗಿದೆ.
ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತ ದೃಷ್ಟಿಯಿಂದ ಜಿಲ್ಲಾಡಳಿತವು ಈ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಇದಕ್ಕೆ ಎಲ್ಲರೂ ಸಹಕರಿಸಿ ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ವಿನಂತಿಸಿದೆ.